ಕಾಸರಗೋಡು: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ.
ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು. ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.
![](https://zoomintv.online/wp-content/uploads/2023/03/IMG-20230328-WA0067-1024x768.jpg)
ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.