ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮುಹೂರ್ತ ನಿಗದಿಯಾಗಲಿದೆ.
ಇಂದು ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ದೆಹಲಿಯಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ.
ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ.
ಚುನಾವಣಾ ದಿನಾಂಕ (Election Date) ಘೋಷಣೆಗೂ ಮುನ್ನವೇ ಕಾಂಗ್ರೆಸ್ (Congress) 124 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಬಿಜೆಪಿ ಮತ್ತು ಜೆಡಿಎಸ್ (BJP And JDS) ಸಹ ಅಬ್ಬರದ ಪ್ರಚಾರ ನಡೆಸುತ್ತಿವೆ.