ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೇ ತಮ್ಮ ಪಕ್ಷದ ಅಭ್ಯರ್ಥಿಯ ವಿರುದ್ಧವೇ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸುಳ್ಯ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಜಿಗಣಿ ಕೃಷ್ಣಪ್ಪ ಅವರಿಗೆ ಟಿಕೆಟ್ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಸುಳ್ಯದ ಕಾಂಗ್ರೆಸ್ ಹಲವು ಕಾರ್ಯಕರ್ತರು ದ.ಕ ಕಾಂಗ್ರೆಸ್ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯಿಸಿ, ಟಿಕೆಟ್ ಅಕಾಂಕ್ಷಿ ನಂದಕುಮಾರ್ ಪರವಾಗಿ ಕಾರ್ಯಕರ್ತರು ಧ್ವನಿಗೂಡಿಸಿದ್ದಾರೆ.
ನಂದಕುಮಾರ್ ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ, ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮೂಲಕ ಪಟ್ಟಿ ಪರಿಷ್ಕರಣೆಗೆ ಕಾರ್ಯಕರ್ತರು ಮನವಿ ಮಾಡಿದ್ದಾರೆ..