ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಿಂದ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಮುಂದಿನ 14 ದಿನಗಳ ಕಾಲ ಕಠಿಣ ನಿಯಮಗಳನ್ನು ಮುಂದುವರೆಸಿದೆ. ಆದರೆ ಮದ್ಯ ಪ್ರಿಯರಿಗೆ ರಿಲೀಫ್ ನೀಡಿ ಪ್ರತಿ ದಿನ 4 ಗಂಟೆಗಳ ಕಾಲ ಮದ್ಯ ಪಾರ್ಸೆಲ್ಗೆ ಅನುಮತಿ ನೀಡಲಾಗಿದೆ. ಬೆಳಗ್ಗೆ 6 ರಿಂದ 10 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಈ ವೇಳೆ ಪಾರ್ಸೆಲ್ ನೀಡಲು ಮಾತ್ರ ಅವಕಾಶವಿದೆ ಎಂದು ಸಿಎಂ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಮಾಹಿತಿ ನೀಡಿದರು.