ಬೀದರ್: ಬಿಜೆಪಿ ಶಾಸಕರೊಬ್ಬರು ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ.
ಶ್ರೀರಾಮನ ನವಮಿಯಂದು ಬಿಜೆಪಿ ಶಾಸಕ ಮಾಡಿಕೊಂಡಿರುವ ಎಡವಟ್ಟಿನ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಮೂಲಕ ಶಾಸಕರು ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಶ್ರೀರಾಮನಿಗೆ ಅವಮಾನ ಮಾಡಿದ್ರಾ ಎಂಬ ಪ್ರಶ್ನೆ ಹುಟ್ಟಿದೆ.
ಬಸವಕಲ್ಯಾಣದಲ್ಲಿ ನಡೆದ ಶ್ರೀರಾಮನ ಶೋಭಾಯಾತ್ರೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ಶ್ರೀರಾಮನ ಎಡಗಡೆಯ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕಿ ಪೋಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ನೆರೆದಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಶಾಸಕರ ನಡೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.