ಸುಳ್ಯ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಅನ್ನು ನಂದಕುಮಾರ್ ರಿಗೆ ನೀಡಬೇಕು ಎಂದು ನಂದಕುಮಾರ್ ಪರ ಕಾರ್ಯಕರ್ತರು ಬೆಂಗಳೂರಿಗೆ ತೆರಳಿ ಕಾಂಗ್ರೆಸ್ ನಾಯಕರನ್ನು ಕಂಡು ಅಹವಾಲು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಹಾಗೂಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿ.ಎಂ.ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ರನ್ನು ಭೇಟಿ ಮಾಡಿದನಿಯೋಗ ತಮ್ಮ ಬೇಡಿಕೆಯನ್ನು ಮುಂದಿಟ್ಟಿದೆ.

ನಂದಕುಮಾರ್ ಸುಳ್ಯ ಕ್ಷೇತ್ರದಲ್ಲಿ ಮಾಡಿದ ಕೆಲಸದ ಕುರಿತು ವಿವರ ನೀಡಿದರೆನ್ನಲಾಗಿದೆ. ಅಹವಾಲು ಆಲಿಸಿದ ನಾಯಕರು ಎರಡು ದಿನದಲ್ಲಿ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆಂದು ತಿಳಿದುಬಂದಿದೆ.