ಬೆಂಗಳೂರು: ರಾಜ್ಯದಲ್ಲಿ 14 ದಿನ ಕೊರೋನಾ ಕರ್ಪ್ಯೂ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ( ವಿಟಿಯು) ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಮುಂದಿನ ಆದೇಶದವರೆಗೂ ಪರೀಕ್ಷೆಗಳನ್ನು ಮುಂದೂಡಿ ವಿಟಿಯು ತನ್ನ ಆದೇಶದಲ್ಲಿ ಹೊರಡಿಸಿದೆ.
14 ದಿನಗಳ ಕಾಲ ರಾಜ್ಯದಲ್ಲಿ ‘ಕೊರೋನಾ ಕರ್ಪ್ಯೂ’ ಜಾರಿಗೊಳಿಸಿ ರಾಜ್ಯ ಸರ್ಕಾರ ಮಹತ್ತರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಅವಶ್ಯವಾಗಿರುವ ಸೇವೆಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗಿದೆ.