ಉಡುಪಿ : ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಕೆರಾಡಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಆಯ್ಕೆಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಡಾ.ಅತುಲ್ ಕುಮಾರ್ ಶೆಟ್ಟಿ ಮತ್ತು ಚಂದ್ರಶೇಖರ ಶೆಟ್ಟಿ ಉಮೇದುದಾರರಾಗಿದ್ದರು. ಚುನಾವಣೆ ಪ್ರಕ್ರಿಯೆಯಲ್ಲಿ ಚಂದ್ರಶೇಖರ ಶೆಟ್ಟಿ ಕೆರಾಡಿ ಅವರು 5 ಮತಗಳನ್ನು, ಡಾ.ಅತುಲ್ ಕುಮಾರ್ ಶೆಟ್ಟಿ 4 ಮತಗಳನ್ನು ಪಡೆದರು.
ಆರು ತಿಂಗಳ ಹಿಂದೆ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ ನಡೆದಿದ್ದು, ಆದರೆ, ಅಧ್ಯಕ್ಷರ ಆಯ್ಕೆ ಮಾತ್ರ ಆಗಿರಲಿಲ್ಲ. ಹಾಗಾಗಿ ಎಪ್ರಿಲ್ 26ರ ಸೋಮವಾರದಂದು ಚುನಾವಣೆ ಏರ್ಪಟ್ಟಿತ್ತು.ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಕೆ.ರಾಜು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.