ಮಂಗಳೂರು: ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿಯ ನಿವಾಸಿ, ಮೂಲತಃ ನವದೆಹಲಿಯವರಾದ, 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ದೀಕ್ಷಿತಾ ಅಲಿಯಾಸ್ ರಿಯಾ (20) ನಾಪತ್ತೆಯಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವ್ಯಸ್ತವಾಗಿರುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು. ಎ.4 ರಂದು ಸಂಜೆ 5 ಗಂಟೆಗೆ ಮನೆಯಿಂದ ತೆರಳಿದವರು ಮರಳಿಲ್ಲ.
ಎತ್ತರ 5.1 ಅಡಿ ಎತ್ತರ, ದುಂಡು ಮುಖ ಗೋಧಿ ಮೈಬಣ್ಣ. ಮನೆಯಿಂದ ಹೋಗುವಾಗ ಹಳದಿ ನೀಲಿ ಮಿಶ್ರಿತ ಚೂಡಿದಾರ ಧರಿಸಿದ್ದು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಯುವತಿ ಕಂಡುಬಂದಲ್ಲಿ ಉರ್ವ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























