ಪುತ್ತೂರು : ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಎ.7 ರಂದು ನಿಧನರಾದರು.

ದೇವಪ್ಪ ನೋಂಡಾ ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.


























