ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ನೀತಿಸಂಹಿತೆ ಉಲ್ಲಂಘನೆಯಾಗುವಂತಹ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವೆಂದು ಪೊಲೀಸ್ ಅಧೀಕ್ಷಕರು ಸೂಚನೆ ನೀಡಿದ್ದಾರೆ.
- ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗುವಂತಹ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
- ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸುದ್ದಿ ಹಾಕುವುದು ಕಾನೂನಿನ ಪಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
- ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
- ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಅಶ್ಲೀಲ, ಅಸಭ್ಯ ವಿಷಯಗಳನ್ನು ಒಳಗೊಂಡ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
- ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಚಾರಿತ್ರ್ಯ ಹರಣ ಹಾಗೂ ಮಾನಹಾನಿ ಉಂಟಾಗುವಂತಹ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗಳಲ್ಲಿ Social Media Monitoring Cell ಕಾರ್ಯನಿರ್ವಹಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಎಲ್ಲಾ ರೀತಿಯ ಪೋಸ್ಟ್ ಗಳ ಮೇಲೆ ನಿಗಾ ಇರಿಸಿ ಪರಿಶೀಲಿಸುತ್ತಿದ್ದು, ಈ ಮೇಲೆ ತಿಳಿಸಿರುವಂತಹ ಯಾವುದೇ ಅಕ್ಷೇಪಾರ್ಹ ಪೋಸ್ಟ್ ಗಳನ್ನು ಅಥವಾ ಯಾವುದೇ ಕಾನೂನುಬಾಹಿರ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಕಂಡುಬಂದಲ್ಲಿ, ಅಂತವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


























