ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಬಿಜೆಪಿ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ. ಹೀಗಾಗಿ ಶುಕ್ರವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನಿವಾಸದಲ್ಲಿ ಬೃಹತ್ ಸಭೆ ನಡೆಯಿತು.
ಕರ್ನಾಟಕದ ಅಭ್ಯರ್ಥಿಗಳ ಹೆಸರಿಗೆ ಸಂಬಂಧಿಸಿದಂತೆ ವಿಚಾರ ಮಂಥನ ನಡೆದಿದೆ. ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಮನ್ಸುಖ್ ಮಾಂಡವಿಯಾ, ಗುಜರಾತ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಸಭೆಯಲ್ಲಿ ಉಪಸ್ಥಿತರಿದ್ದರು. ಕರ್ನಾಟಕಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೋರ್ ಗ್ರೂಪ್ ಸಭೆ ನಡೆಯಲಿದೆ.
ಬಿಜೆಪಿ ಲಿಸ್ಟ್ ಬಳಿಕ ‘ಕೈ’ 3ನೇ ಲಿಸ್ಟ್..!!
ರಾಜ್ಯ ಕಾಂಗ್ರೆಸ್ ಚುನಾವಣೆಗೆ ಭರ್ಜರಿ ಸಿದ್ಧತೆಯನ್ನು ನಡೆಸಿದೆ. ಈಗಾಗಲೇ ಕಾಂಗ್ರೆಸ್ ಎರಡು ಪಟ್ಟಿಯಲ್ಲಿ ಬಿಡುಗಡೆ ಮಾಡಿದ್ದು, ಒಟ್ಟು 166 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಫೈನಲ್ ಆಗಿದ್ದಾರೆ. ಇನ್ನೂ ಬಾಕಿ ಉಳಿದಿರೋ 58 ಕ್ಷೇತ್ರಗಳು ಕಾಂಗ್ರೆಸ್‌ಗೆ ಕಗ್ಗಂಟು ಆಗಿದೆ.
ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ಬಿಜೆಪಿ ಟಿಕೆಟ್ ಘೋಷಿಸಿದ್ಮೇಲೆ ಕಾಂಗ್ರೆಸ್ 3ನೇ ಲಿಸ್ಟ್ ಬಿಡುಗಡೆ ಮಾಡುತ್ತೇವೆ. ಬಿಜೆಪಿಯಿಂದ ಕೆಲವರು ಬರೋರಿದ್ದಾರೆ ಎಂದಿದ್ದಾರೆ.


























