ಪುತ್ತೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ನರಿಮೊಗರು ಪುತ್ತೂರು ಇದರ ಆಶ್ರಯದಲ್ಲಿ ಟಾಟಾ ಟೆಕ್ನಾಲಜೀಸ್ ಇದರ ಸಹಭಾಗಿತ್ವದಲ್ಲಿ ಉನ್ನತೀಕರಿಸಿಗೊಳಿಸುವ ರೂ.1ಕೋಟಿ ಅನುದಾನದ ಕಟ್ಟಡ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಪುತ್ತೂರು ಎ.ಪಿ.ಎಂ.ಸಿ. ಅಧ್ಯಕ್ಷರಾದ ದಿನೇಶ್ ಮೆದು, ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸದಸ್ಯರುಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.