ನವದೆಹಲಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ.
ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವದೆಹಲಿಯಲ್ಲಿ ತಿಳಿಸಿದರು.
ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಬಿಎಸ್ ವೈ ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ 170 ರಿಂದ 180 ಹೆಸರುಗಳನ್ನು ಪ್ರಕಟಿಸಲಾಗುವುದು ಎಂದರು.

























