ಬಂಟ್ವಾಳ: ಹೆಚ್ಚುತ್ತಿರುವ ಮಾರಕ ಸಾಂಕ್ರಾಮಿಕ ಕಾಯಿಲೆ ಕೋವಿಡ್ -19 ತಡೆಗಟ್ಟುವ ದೃಷ್ಟಿಯಿಂದ ಬಂಟ್ವಾಳ ತಹಶೀಲ್ದಾರ್ ಮತ್ತು ಆರೋಗ್ಯ ಕೇಂದ್ರ ಗಳ ವೈದ್ಯಾಧಿಕಾರಿಗಳೊಂದಿಗೆ ಶಾಸಕರಾದ ಸಂಜೀವ ಮಠಂದೂರು ರವರು ಸಭೆ ನಡೆಸಿದರು.
ಪ್ರಸ್ತುತ ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಲಸಿಕೆಗಳ ಲಭ್ಯತೆ, ಹೊರಜಿಲ್ಲೆಯಿಂದ ಬರುವ ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಹೋಮ್ ಕ್ವಾರೈಂಟೈನ್ ಮಾಡುವ ಬಗ್ಗೆ ಸೂಕ್ತ ನಿರ್ದೇಶನವನ್ನು ಶಾಸಕರು ನೀಡಿದರು. ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀಮತಿ ಮಾಲಿನಿ, ವಿಟ್ಲ ಠಾಣೆಯ ಪ್ರೋಭೇಷನರಿ ಠಾಣಾಧಿಕಾರಿ ಮಂಜುನಾಥ್ ಮತ್ತು ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.
![](https://zoomintv.online/wp-content/uploads/2021/04/WhatsApp-Image-2021-04-27-at-4.15.31-PM-1024x484.jpeg)