ಪುತ್ತೂರು : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿಕೆಟ್ ಫೈನಲ್ ಬಗ್ಗೆ ತಿಳಿಯುತ್ತಿದ್ದಂತೆ ಅಸಮಾಧಾನದ ಬಿಸಿ ಭುಗಿಲೆದ್ದಿದೆ.
ಪುತ್ತೂರಿನ ಟಿಕೆಟ್ ಆಕಾಂಕ್ಷಿಯಾದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದಲ್ಲಿ ಪಕ್ಷದಲ್ಲಿ ಇದುವರೆಗೆ ದುಡಿದ ಕಾರ್ಯಕರ್ತರಿಗೆ ಬೇಸರ ತರಲಿದೆ. ಹಾಗಾಗಿ ಪಕ್ಷದ ಜವಾಬ್ದಾರಿಯಲ್ಲಿರುವ ಹುದ್ದೆಗೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಹಲವು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಸನತ್ ರೈ ಎಲ್ನಾಡುಗುತ್ತು, ಸೇವಾದಳ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜ, ಕಾರ್ಮಿಕ ಘಟಕದ ಅಧ್ಯಕ್ಷ ಶರೂನ್ ಸ್ವಿಕ್ವೇರ, ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ವಿಶಾಲಾಕ್ಷಿ ಬನ್ನೂರು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸೀತಾ ಭಟ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಪೂರ್ಣೇಶ್ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಜೋನ್ ಸೀರೀಲ್ ರೊಡಿಗ್ರಸ್, ಪಾಣಾಜೆ ವಲಯ ಅಧ್ಯಕ್ಷ ಬಾಬು ರೈ ಕೋಟೆ, ಪುತ್ತೂರು ಬ್ಲಾಕ್ ಮಹಿಳಾ ಕೋಶಾಧಿಕಾರಿ ಶುಭ ಮಾಲಿನಿ ಮಲ್ಯ, ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ರಶೀದ್ ಅಮ್ಚಿನಡ್ಕ, ಎನ್.ಎಸ್.ಯು.ಐ ಅಧ್ಯಕ್ಷ ಚಿರಾಗ್ ರೈ ಮೇಗಿನಗುತ್ತು ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.
























