ಪುತ್ತೂರು : ಬಿಜೆಪಿ ಪಕ್ಷದ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಅಸಮಾಧಾನಗೊಂಡ ಕಾರ್ಯಕರ್ತರು ರಾಜೀನಾಮೆ ನೀಡುತ್ತಿರುವ ಬಗ್ಗೆ ವರದಿಯಾಗಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಬೂತ್ ಸಂಖ್ಯೆ 215ರ ಅಧ್ಯಕ್ಷರಾದ ರಜನೀಶ್ ಎಂಬವರ ಪಕ್ಷದ ಜವಾಬ್ದಾರಿಗೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯು ಕಾರ್ಯಕರ್ತರಿಗೆ ತುಂಬಾ ನೋವುಂಟಾಗಿರುತ್ತದೆ. ಪುತ್ತೂರು ಕ್ಷೇತ್ರದ ಪರಿಚಯವೇ ಇಲ್ಲದ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದು ಪುತ್ತೂರು ಕ್ಷೇತ್ರದ ನಿಷ್ಠಾವಂತ ಕಾರ್ಯಕರ್ತರಿಗೆ ಮಾಡಿದ ಅನ್ಯಾಯವಾಗಿದೆ. ಪುತ್ತೂರಿನಲ್ಲಿರುವ ಹಿಂದುತ್ವ, ಪಕ್ಷ, ಸಮಾಜಕ್ಕಾಗಿ ದುಡಿದ ಕಾರ್ಯಕರ್ತರಿಗೆ ಟಿಕೆಟ್ ಕೊಡದಿರುವುದು ತುಂಬಾ ಬೇಸರದ ಸಂಗತಿ. ಈ ಎಲ್ಲಾ ಕಾರಣಗಳಿಂದ ಬೇಸತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ..























