ಪುತ್ತೂರು : ಅಪಘಾತದಿಂದಾಗಿ ಗಂಭೀರ ಗಾಯಗೊಂಡಿದ್ದ ಮುಂಡೂರು ವೆಂಕಟೇಶ್ ಉದ್ಧಾರ್ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.
ಮೂಲತ: ಧಾರವಾಡದವರಾದ ಇವರು ಪುತ್ತೂರಿನಲ್ಲಿ ಸರಕಾರಿ ಕೆಲಸದಲ್ಲಿ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರಿನಿಂದ ಬೈಕ್ ನಲ್ಲಿ ಬರುವಾಗ ಮಾಣಿ ಸಮೀಪ ಅಪಘಾತ ಸಂಭವಿಸಿದೆ. ತಲೆಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.