ಬಂಟ್ವಾಳ : ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಮನೆಯೊಳಗೆ ನೇಣುಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಪತ್ನಿ ಆತ್ಮಹತ್ಯೆ ಮಾಡಿಕೊಳ್ಳಲು ವ್ಯಕ್ತಿಯೋರ್ವನ ದುಷ್ಪೇರಣೆ ಕಾರಣವಾಗಿದೆ ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಮೌಖಿಕವಾಗಿ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರವಿ ಎಂಬಾತನ ಬಗ್ಗೆ ಸಂಶಯವಿದ್ದು, ಪತ್ನಿ ಜೊತೆ ಈತ ಸಲುಗೆಯಿಂದ ಇದ್ದು ಇಬ್ಬರಿಗೂ ಬುದ್ದಿವಾದ ಹೇಳಿದ್ದೆ. ಆದರೆ ಇತ್ತೀಚಿಗೆ ಪತ್ನಿ ಈತನ ಕಾಟ ತಾಳಲಾರದೆ ಮಾನಸಿಕವಾಗಿ ನೊಂದಿದ್ದಳು. ಹಾಗಾಗಿ ಪತ್ನಿಯನ್ನು ಏಕಾಂಗಿಯಾಗಿ ಬಿಟ್ಟು ಹೋಗುತ್ತಿರಲಿಲ್ಲ. ಆದರೆ ನಿನ್ನೆ ಅಗತ್ಯವಾಗಿ ಹೊರಗೆ ಹೋಗಲು ಇದ್ದ ಕಾರಣ ಹೋಗಿ ವಾಪಾಸು ಬರುವ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ತಿಳಿಸಿದ್ದಾರೆ.


























