ಮಡಿಕೇರಿ: ರಾಜ್ಯದಲ್ಲಿ ಕೊರೊನಾ ತಾಂಡವಾಡುತ್ತಿದೆ, ಜನ ಆಕ್ಸಿಜನ್ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಹೊರಗಡೆ ಮಸೀದಿಯನ್ನು ಮುಚ್ಚಲಾಗಿದೆ ಎಂಬ ಬೋರ್ಡ್ ಹಾಕಿ, ಕಾನೂನಿನ ಕಣ್ಣಿಗೆ ಮಣ್ಣೆರಚಿ 150ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರವಚನ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಕೊಡಗಿನ ಆರ್ಜಿ ಗ್ರಾಮದ ಮಸೀದಿಯಲ್ಲಿ ಪಾಠ, ಪ್ರವಚನ ಮಾಡಲಾಗುತ್ತಿದ್ದು, ವಿರಾಜಪೇಟೆ ತಹಶೀಲ್ದಾರ್ ಯೋಗಾನಂದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಇಲ್ಲದೆ ಮಕ್ಕಳನ್ನು ಸೇರಿಸಿಕೊಂಡು ಪಾಠಪ್ರವಚನ ಮಾಡುತ್ತಿದ್ದು, ಮಕ್ಕಳಿಗೆ ಕೊರೊನಾ ಸೋಂಕು ತಗುಲಿದರೆ ಗತಿ ಏನು ಎಂಬ ಪ್ರಶ್ನೆ ಎದ್ದಿದೆ. ಧರ್ಮ ಬೋಧಿಸುವ ಇವರೇ ಕಾನೂನಿಗೆ ಮಣ್ಣೆರೆಚಿದರೆ ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.
ಒಳಗೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಪ್ರವಚನ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ. ಮಸೀದಿ ಆಡಳಿತ ಮಂಡಳಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಈ ಕುರಿತು ಸ್ಥಳೀಯರಲ್ಲಿ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಸಹ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಇಂತಹ ಸಂದರ್ಭದಲ್ಲಿ ಹೀಗೆ ಮಕ್ಕಳನ್ನು ಸೇರಿಸಿಕೊಂಡಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.