ಬಂಟ್ವಾಳ: ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.
ಬಂಟ್ವಾಳ ಲೊರೆಟ್ಟೋ ನಿವಾಸಿ ಧೀರಜ್ ಮೃತ ಯುವಕ.
ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್ ರಾತ್ರಿ ಊಟ ಮಾಡಿ ಮಲಗಿದ್ದರು. ಬೆಳಗ್ಗೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು.
ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.


























