ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಎ.16 ಮತ್ತು 17 ರಂದು ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.
- ಉಪ್ಪಿನಂಗಡಿ, ಕೋಡಿಂಬಾಡಿ, ಬನ್ನೂರು ಮಾರ್ಗವಾಗಿ ಬರುವವರು : ಎಪಿಎಂಸಿ ಆವರಣ, ಕೊಂಬೆಟ್ಟು ಬೋರ್ಡ್ ಹೈಸ್ಕೂಲ್ ಮೈದಾನ, ಬಂಟರ ಭವನ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನ
- ಸಂಪ್ಯ, ಸುಳ್ಯ, ಪಾಣಾಜೆ, ಪರ್ಲಡ್ಕ, ಪುರುಷರಕಟ್ಟೆ ಮಾರ್ಗವಾಗಿ ಬರುವವರು : ತೆಂಕಿಲ ಗೌಡ ಸಮುದಾಯ ಭವನ, ಅದರ ಸುತ್ತ-ಮುತ್ತಲಿನ ಖಾಲಿಜಾಗ, ತೆಂಕಿಲ ವಿವೇಕಾನಂದ ಶಾಲಾ ಮೈದಾನ, ಕಿಲ್ಲೆ ಮೈದಾನ
- ವಿಟ್ಲ, ಕಬಕ, ನೆಹರುನಗರ ಮಾರ್ಗವಾಗಿ ಬರುವವರು : ತೆಂಕಿಲ ದರ್ಶನ್ ಹಾಲ್ ಪಕ್ಕದ ಖಾಲಿ ಜಾಗ, ಆಶ್ಮಿ ಲಾಡ್ಜ್ ಬಳಿ ಇರುವ ಖಾಲಿ ಜಾಗ, ಜೈನ ಭವನದ ಪಾರ್ಕಿಂಗ್ ಜಾಗ

ಆಟೋರಿಕ್ಷಾ ಸಂಚರಿಸುವ ಮಾರ್ಗ ಎಪ್ರಿಲ್ 16 ಮತ್ತು 17
ನೆಹರೂನಗರ-ಬೊಳುವಾರು ಕಡೆಯಿಂದ ಬರುವ ಆಟೋರಿಕ್ಷಾಗಳು ಮಯೂರ ಇನ್ ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಅಲ್ಲಿಂದ ಉರ್ಲಾಂಡಿ ಕ್ರಾಸ್ ಮೂಲಕ ವಾಪಾಸು ಸಂಚರಿಸುವುದು.
ದರ್ಬೆ ಕಡೆಯಿಂದ ಬರುವ ಆಟೋ ರಿಕ್ಷಾಗಳು ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಇಳಿಸಿ ವಾಪಾಸು ಸಂಚರಿಸುವುದು.
ಪರ್ಲಡ್ಕ-ಬಪ್ಪಳಿಗೆ ಕಡೆಯಿಂದ ಬರುವ ಆಟೋರಿಕ್ಷಾಗಳು ತೆಂಕಿಲ ಮೂಲಕ ಕಿಲ್ಲೆ ಮೈದಾನದ ಬಲಿ ಪ್ರಯಾಣಿಕರನ್ನು ಇಳಿಸಿ ವಾಪಾಸು ಸಂಚರಿಸುವುದು.

ಸಾರಿಗೆ ಬಸ್ ಸಂಚರಿಸುವ ಮಾರ್ಗ ಎಪ್ರಿಲ್ 16 ಮತ್ತು 17
ಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‌ಗಳು ಎಂ.ಟಿ ರಸ್ತೆಯ ಮೂಲಕ ತೆರಳಿ, ಮುಂದೆ ಎಡಕ್ಕೆ ತಿರುಗಿ ಪರ್ಲಡ್ಕ ಬೈಪಾಸ್ ಮೂಲಕ ತೆರಳಬೇಕು.
ಕಬಕ- ಮಂಗಳೂರು ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ ಗಳು ಬೊಳುವಾರು-ಪಡೀಲ್-ಕೊಟೆಚಾ ಹಾಲ್ ಕ್ರಾಸ್-ಸಾಲ್ಮರ- ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.
ಉಪ್ಪಿನಂಗಡಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ ಗಳು ಪಡೀಲ್-ಕೊಟೆಚಾ ಹಾಲ್ ಕ್ರಾಸ್-ಸಾಲ್ಮರ- ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.
ಸುಳ್ಯ-ಸಂಪ್ಯ-ಮಡಿಕೇರಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ ಗಳು ಅಶ್ವಿನಿ ಜಂಕ್ಷನ್-ದರ್ಬೆ-ಅರುಣ ಥಿಯೇಟರ್ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.





























