ಪುತ್ತೂರು : ಮೇ.10 ರಂದು ನಡೆಯುವ ಚುನಾವಣೆಯ ಪೂರ್ವಭಾವಿಯಾಗಿ ಎ.16 ರಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಅರುಣ್ ಕುಮಾರ್ ಪುತ್ತಿಲ ರವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.17 ರಂದು ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪ್ರತಿ ಮನೆಗೆ ಸಂಪರ್ಕ ಮಾಡಲು ಕಷ್ಟ ಸಾಧ್ಯವಾಗಿದೆ. ಈ ಹಿನ್ನೆಲೆ ಪ್ರತಿ ಮನೆಗೆ ಆಮಂತ್ರಣ ಪತ್ರವೆಂದು ತಿಳಿದು ಆಗಮಿಸಬೇಕು.
ಎ.17 ರಂದು ನಾಮಪತ್ರ ಸಲ್ಲಿಸುವ ವೇಳೆ ಎಲ್ಲರೂ ದರ್ಬೆಯಿಂದಲೇ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಹಿಂದುತ್ವ ಆಧಾರದಲ್ಲಿ ಈ ಚುನಾವಣೆಯನ್ನು ಎದುರಿಸುವಂತಹ ಸಂದರ್ಭದಲ್ಲಿ ಆಶೀರ್ವಾದವನ್ನು ಮಾಡಿ ಹಿಂದುತ್ವದ ಆಧಾರದಲ್ಲಿ ಕ್ಷೇತ್ರವನ್ನು ಉಳಿಸುವುದಕ್ಕೆ ನಮಗೆ ಸಹಕಾರವನ್ನು ನೀಡಬೇಕು ಎಂದರು.




























