ಪುತ್ತೂರು : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಹಿನ್ನೆಲೆ ದರ್ಬೆ ಜಂಕ್ಷನ್ ನಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.

ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಪುತ್ತಿಲ ರವರು ಹಿಂದುತ್ವದ ಧ್ವನಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪುತ್ತಿಲ ಪರ ಪ್ರಚಾರ ನಡೆಸಲು ಸಾವಿರಾರು ಕಾರ್ಯಕರ್ತರು ಉತ್ಸುಕರಾಗಿದ್ದಾರೆ..




























