ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ರವರು ಎ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ 9.30ಕ್ಕೆ ದರ್ಬೆ ವೃತ್ತದ ಬಳಿಯಿಂದ ಮೆರವಣಿಗೆ ಹೊರಡಲಿದೆ. ಬಳಿಕ ಮೆರವಣಿಗೆಯು ಮುಖ್ಯರಸ್ತೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಾಗುವುದು.
ಎ.18 ರಂದು ಮಸೀದಿ, ಚರ್ಚ್ ಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























