ಹುಬ್ಬಳ್ಳಿ: ಬಿಜೆಪಿಯಲ್ಲಿ ಬಿ.ಎಲ್ ಸಂತೋಷ್ ಷಡ್ಯಂತ್ರದಿಂದ ನನಗೆ ಟಿಕೆಟ್ ಕೈತಪ್ಪಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರದಂದು, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ದಿಡೀರ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಎಲ್. ಸಂತೋಷ್ ವಿರುದ್ದ ಗಂಬೀರ ಆರೋಪ ಮಾಡಿದರು. ಬಿಜೆಪಿಯ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರು ಇತ್ತು ಅನ್ನೋದು ಗೊತ್ತಿದೆ. ಆದರೆ ಹೈಕಮಾಂಡ್ ಲೇವಲ್ ನಲ್ಲಿ ಏನು ನಡೆದಿದೆಯೋ ಗೊತ್ತಿಲ್ಲ.
ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. ಅವರ ಟೀಂ ಕೂಡ ನನ್ನ ವಿರುದ್ಧ ಅಪಪ್ರಚಾರ ಮಾಡಿದರು. ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು ಎಂದು ಎಂದು ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬಿ.ಎಲ್ ಸಂತೋಷ್ ಕೃಪೆಯಿಂದ ಪಕ್ಷದಲ್ಲಿ ನನ್ನ ಬಗ್ಗೆ ಇಲ್ಲಸಲ್ಲದ ಸುದ್ದಿ ಹಬ್ಬಿಸಿದರು. ವ್ಯಕ್ತಿಯೊಬ್ಬನಿಗೆ ಟಿಕೆಟ್ ನೀಡುವ ಸಲುವಾಗಿ ಇಂದು ಪಕ್ಷ ಒಡೆಯುತ್ತಿದೆ. ಟಿಕೆಟ್ ಕೊಡಿಸುವ ಸಲುವಾಗಿ ತಂತ್ರ, ಕುತಂತ್ರ ನಡೆದಿದೆ. ಇದೆಲ್ಲದಕ್ಕೂ ಬಿ.ಎಲ್ ಸಂತೋಷ್ ಅವರ ಪ್ರಿಪ್ಲ್ಯಾನ್ ಇದೆ. ಒಬ್ಬರಿಗಾಗಿ ಇಡೀ ರಾಜ್ಯದ ಬಿಜೆಪಿಗೆ ಬೆಂಕಿ ಹಚ್ಚುತ್ತಿದ್ದಾರೆ. ನಮ್ಮಲ್ಲಿ ಪಕ್ಷ ಮುಖ್ಯ, ಆದರೆ ವ್ಯಕ್ತಿ ಮುಖ್ಯ ಅಲ್ಲ ಎನ್ನುವ ಮಾತಿದೆ. ಆದರೆ ಬಿಎಲ್ ಸಂತೋಷಗೆ ಪಕ್ಷ ಮುಖ್ಯ ಅಲ್ಲ ವ್ಯಕ್ತಿ ಮುಖ್ಯ ಎಂದು ಗುಡುಗಿದರು.

























