ಪುತ್ತೂರು : ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮಂಗಳೂರು ಜಿಲ್ಲಾ ಘಟಕದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ರವರ ಮನೆಗೆ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ ನೀಡಿದರು.

ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಪುತ್ತಿಲ ರವರು ಪ್ರವೀಣ್ ತಂದೆ-ತಾಯಿಯ ಆಶೀರ್ವಾದ ಪಡೆದರು.

ನೆಟ್ಟಾರು ಮನೆಯಲ್ಲಿ ನಡೆದ ಸರ್ಪಸಂಸ್ಕಾರದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಹಲವು ಮಂದಿ ಉಪಸ್ಥಿತರಿದ್ದರು.

























