ಪುತ್ತೂರು: ಪ್ರಗತಿಪರ ಕೃಷಿಕ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಕಾನಾವು ( 79) ಎ.18 ರಂದು ರಾತ್ರಿ ನಿಧನರಾದರು.

ಮೃತರು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಮೊಕ್ತೇಸರರಾಗಿ ಸೇರಿದಂತೆ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಪುತ್ರಿ, ಪುತ್ರರಾಗಿರುವ ಕಾನಾವು ಕ್ಲಿನಿಕ್ ನ ವೈದ್ಯ ಡಾ.ನರಸಿಂಹ ಶರ್ಮಾ ಕಾನಾವು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಎ.19 ರಂದು ಅಂತಿಮ ದರ್ಶನಕ್ಕೆ ಅವಕಾಶ
ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಎ.19 ರಂದು ಬೆಳಗ್ಗಿನಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಮನೆಯವರು ತಿಳಿಸಿದ್ದಾರೆ.
























