ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, “ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆಯಾಗಿದೆ.
ಸದ್ಯ ಬಿಸಿ ಗಾಳಿಯ ಯಾವುದೇ ಮುನ್ನೆಚ್ಚರಿಕೆ ಇಲ್ಲ. ಮಂಗಳೂರಿನಲ್ಲಿ 35 ಡಿ.ಸೆ. ಗರಿಷ್ಠ ಮತ್ತು 25.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ತಲಾ 1 ಡಿ.ಸೆ. ಉಷ್ಣಾಂಶ ವಾಡಿಕೆಗಿಂತ ಹೆಚ್ಚಿತ್ತು.


























