ಪುತ್ತೂರು : ಬೆದ್ರಾಳ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಟಿಪ್ಪರ್ ಲಾರಿಯೊಂದು ಬೆದ್ರಾಳ ರೈಲ್ವೇ ಸೇತುವೆ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಧರೆಗೆ ಉರುಳಿ ಬಿದ್ದಿದ್ದು, ತಂತಿಗಳು ತುಂಡಾಗಿ ಬಿದ್ದಿವೆ.

ಟಿಪ್ಪರ್ ಚಾಲಕನ ಕೈ ಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.


























