ಶ್ರೀನಗರ: ಸೇನಾ ಟ್ರಕ್‌ಗೆ ಬೆಂಕಿ ತಗುಲಿದ ಪರಿಣಾಮ ನಾಲ್ವರು ಯೋಧರು ಸಜೀವದಹನವಾಗಿರುವ ಭೀಕರ ಘಟನೆ ಜಮ್ಮುಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಸಿಡಿಲು ಬಡಿದ ಪರಿಣಾಮ ಯೋಧರನ್ನು ಸಾಗಿಸಲಾಗುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತುಕೊಂಡಿದೆ. ಪರಿಣಾಮ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಸೇನೆ ಹಾಗೂ ಪೊಲೀಸ್ ಸಿಬ್ಬಂದಿ ಆಗಮಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.


























