ಬೆಂಗಳೂರು : 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ.
ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು.
ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ರಾಜ್ಯದಲ್ಲಿ ಮೊದಲ ರ‍್ಯಾಂಕ್ ಪಡೆದವರು
- ಕಲಾ : ತಬಸುಮ್ ಶೇಕ್, ಜಯನಗರ ಬೆಂಗಳೂರು
- ವಾಣಿಜ್ಯ: ಅನನ್ಯಾ, ಆಳ್ವಾಸ್ ಮೂಡಬಿದಿರೆ
- ವಾಣಿಜ್ಯ: ಕೌಶಿಕ್
ಮಾ.9ರಿಂದ 29ರ ವರೆಗೆ ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಒಟ್ಟು 7,27,387 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.


























