ಪುತ್ತೂರು : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅರುಣ್ ಕುಮಾರ್ ರವರು ‘ನಮ್ಮ ಯುದ್ಧ ಭಾರತೀಯ ಜನತಾ ಪಾರ್ಟಿ ವಿರುದ್ಧ ಅಲ್ಲ, ಪುತ್ತೂರಿನಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ವಿರುದ್ಧ’ ಎಂದು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಜನರಲ್ಲಿ ಇರುವ ತಪ್ಪು ಕಲ್ಪನೆಗೆ ಒಂದು ಸ್ಪಷ್ಟನೆ ಕೊಡಲು ಬಯಸುತ್ತೇನೆ. ನಮ್ಮ ಯುದ್ಧ ಭಾರತೀಯ ಜನತಾ ಪಕ್ಷದ ವಿರುದ್ಧ ಅಲ್ಲ, ನಮ್ಮ ಯುದ್ಧ ಏನಿದ್ದರು ಪುತ್ತೂರಿನಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಎಸ್.ಡಿ.ಪಿ.ಐಯ ಶಾಫಿ ಬೆಳ್ಳಾರೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಬುದ್ಧಿ ಕಲಿಸುತ್ತೇನೆ ಎಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ವಿರುದ್ಧ’ ಎಂದು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಮೊದಲು ಪುತ್ತಿಲ ರವರು ಈ ಬಗ್ಗೆ ಹೇಳಿದ್ದು, ನಾವು ಚುನಾವಣೆಯಲ್ಲಿ ಗೆದ್ದರೂ ಬೆಂಬಲಿಸುವುದು ಬಿಜೆಪಿಯನ್ನೆ ಎಂದು ಹೇಳಿದ್ದರು.



























