ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ರಿ. ವತಿಯಿಂದ ವಾರ್ಷಿಕ ಮಹಾಸಭೆ, ಶ್ರೀ ಸತ್ಯನಾರಾಯಣ ಪೂಜೆ, ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಎ.22 ರಂದು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಎ.22 ರಂದು ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ಪೂರ್ವಾಹ್ನ 10.30 ರಿಂದ ಸಭಾ ಕಾರ್ಯಕ್ರಮ, ಮಧ್ಯಾಹ್ನ 1 ರಿಂದ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಮಧ್ಯಾಹ್ನ 2ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಅಶೋಕ್ ನಾಯ್ಕ್ ಕೆದಿಲ ರವರು ವಹಿಸಲಿದ್ದಾರೆ.
ಪದ್ಮಶ್ರೀ ಪುರಸ್ಕೃತರಾದ ಮಹಾಲಿಂಗ ನಾಯ್ಕ್ ಅಮೈ ರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಕರ್ನಾಟಕ ಮರಾಟಿ ಸಂಘ ರಿ. ಅಧ್ಯಕ್ಷರಾದ ದೇವಿಪ್ರಸಾದ್ ಮಜಕ್ಕಾರ್ ಕೈಪಿಡಿ ಬಿಡುಗಡೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮರಾಟಿ ಸಮಾಜ ಸೇವಾ ಸಂಘ ಗಂಜಿಮಠದ ಅಧ್ಯಕ್ಷರಾದ ಶೇಖರ್ ಕಡ್ತಲೆ, ಪೆರ್ಲ ಶ್ರೀ ಶಾರದಾ ಮರಾಟಿ ಸಮಾಜ ಸೇವಾ ಸಂಘ ಅಧ್ಯಕ್ಷರಾದ ಬಾಲಕೃಷ್ಣ ಬಾರಿಕ್ಕಾಡು, ಪುತ್ತೂರು ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರಾದ ರಾಮಚಂದ್ರ ನಾಯ್ಕ್, ನ್ಯೂ ಇಂಡಿಯಾ ಅಶ್ಯೂರೆನ್ಸ್ ಡಿವಿಜನಲ್ ಮ್ಯಾನೇಜರ್ ವೇದಾವತಿ ಎನ್., ಪೆರ್ಲಂಪಾಡಿ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪದ್ಮನಾಭ ನಾಯ್ಕ್ ಸರಸ್ವತಿಮೂಲೆ ರವರು ಆಗಮಿಸಲಿದ್ದಾರೆ.

ಕೃಷಿ ಕ್ಷೇತ್ರದಲ್ಲಿ ಭಾರತ ಸರಕಾರದ ಪದ್ಮಶ್ರೀ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕ್ ರವರಿಗೆ ಸನ್ಮಾನ ಹಾಗೂ ಕ್ರೀಡಾ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ, ಧಾರ್ಮಿಕ ಸೇವೆ, ಕಲಾ, ವೈದ್ಯಕೀಯ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























