ಪುತ್ತೂರು : ವಿಧಾನ ಸಭಾ ಚುನಾವಣೆಗೆ ನಾಮಪತ್ರ ಈಗಾಗಲೇ ಸಲ್ಲಿಸಲಾಗಿದ್ದು, ವಿವಿಧ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ಕೂಡ ಚುನಾವಣಾ ಪ್ರಚಾರವನ್ನು ಭರದಿಂದ ಮುನ್ನಡೆಸುತ್ತಿದ್ದು, ಮತದಾರರ ಬಳಿ ತೆರಳಿ ತಮ್ಮ ಪರ ಮತ ನೀಡುವಂತೆ ಪ್ರಚಾರ ನಡೆಸುತ್ತಿದ್ದಾರೆ.

ಪಾಣಾಜೆ ಪರಿಸರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದು, ಮತದಾರರ ಬಳಿ ಮತಯಾಚನೆ ಮಾಡಿದರು.

ಈ ವೇಳೆ ಹಲವು ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.


























