ಮಂಗಳೂರು : ಕರಾವಳಿಯ ಬಿಜೆಪಿ ಮುಖಂಡರು ಇಲ್ಲವೇ ಶಾಸಕರು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ಮನವಿ ಸಲ್ಲಿಸಿರುವ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕೋರ್ಟ್ ನಲ್ಲಿ ಈ ವಿಚಾರವಾಗಿ ತಡೆಯಾಜ್ಞೆ ತಂದಿದ್ದಾರೆ.
ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕರಾವಳಿಯ ಬಿಜೆಪಿ ಅಭ್ಯರ್ಥಿಗಳು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ತಡೆಯಾಜ್ಞೆ ತರುವ ವಿದ್ಯಮಾನಗಳು ಜಾಸ್ತಿಯಾಗುತ್ತಿವೆ.
ವೇದವ್ಯಾಸ್ ಕಾಮತ್ ರವರು ಮಂಗಳೂರು ದಕ್ಷಿಣ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಒಂದು ವರ್ಷ ಸೇವೆ ಸಲ್ಲಿಸಿದ್ದರು. 2018ರಲ್ಲಿ ದಾಖಲೆಯ 86,545 ಮತಗಳನ್ನು ಪಡೆದು ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು.
ಇದೀಗ ಮಂಗಳೂರು ದಕ್ಷಿಣದ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಈ ನಡುವೆ ತಮ್ಮ ವಿರುದ್ಧ ಮಾಧ್ಯಮಗಳು ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.


























