ಪುತ್ತೂರು : ಚಿಕನ್ ಸ್ಟಾಲ್ ನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿತ ಸೈದು ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕೋಟೆಚಾ ಕ್ರಾಸ್ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋ ಮಾಂಸವನ್ನು ವಶಕ್ಕೆ ಪಡಿಸಿಕೊಂಡಿದ್ದು, ಆರೋಪಿತನ ವಿರುದ್ಧ ಠಾಣೆಯ cr ನಂ.27/23 ಕಲಂ 4,12, ಕರ್ನಾಟಕ ಜಾನುವಾರು ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

























