ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿರುವ ಸಿಎಂ, ಕೊರೊನಾ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಿದ್ದಾರೆ. ಇನ್ನು ಈ ಸಭೆಯು ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು, ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ.