ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ಲು ಪುತ್ತೂರಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ 2022-23 ಇದರ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಮಹಾವಿಷ್ಣು ದೇವಸ್ಥಾನ ಶಾಂತಿನಗರದ ಆಡಳಿತ ಮೊಕ್ತೇಸರರಾದ ಯು.ಜಿ. ರಾಧ ರವರು ಉದ್ಘಾಟಿಸಿದರು.

ಶಿಬಿರವು ಎ. 22 ರಿಂದ 28 ರವರೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿದ ಯು.ಜಿ.ರಾಧ ರವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆಯು, ವಿದ್ಯಾರ್ಥಿಗಳು ಇನ್ನಷ್ಟು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಈ ಶಾಲೆಗೆ ಒಂದು ವಾರದ ಶಿಬಿರದಲ್ಲಿ ಪಾಲ್ಗೊಳ್ಳಲು ಬಂದ ತಾವೆಲ್ಲರೂ ಅತ್ಯುತ್ತಮ ಜೀವನ ಪಾಠಗಳನ್ನು ಕಲಿತು ಹೋಗಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಕಾಲೇಜು ಜಿಡೆಕಲ್ಲಿನ ಪ್ರಾಂಶುಪಾಲರಾದ ಪ್ರೊ.ಅಪ್ಪು ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಡೆಕಲ್ಲು ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಮಿತಾ ಪೈ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್, ಸರಕಾರಿ ಪ್ರೌಢಶಾಲೆ ಶಾಂತಿನಗರದ ಮುಖ್ಯಗುರುಗಳಾದ ವಿಷ್ಣುಪ್ರಸಾದ್, ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಬಾಲಚಂದ್ರ.ಎ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತ ಭಾಷಣವನ್ನು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಯಾದ ಸುಜಾತಾ ಪಿ.ಎಸ್ ನಡೆಸಿಕೊಟ್ಟರು. ಸಹ ಶಿಬಿರಾಧಿಕಾರಿ ಕೇಶವ ರವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಉದ್ಘಾಟನಾ ಕಾರ್ಯಕ್ರಮದ ನಿರೂಪಣೆಯನ್ನು ಪ್ರಸಕ್ತ ರೈ ದ್ವಿತೀಯ ಬಿಕಾಂ ನಡೆಸಿಕೊಟ್ಟರು. ಪ್ರಾರ್ಥನೆಯನ್ನು ಮತ್ತು ಎನ್ ಎಸ್ ಎಸ್ ಗೀತೆಯನ್ನು ಪ್ರೀತಿ, ಶ್ರೀಕೃಪಾ, ಹರ್ಷಿತಾ ಪ್ರಥಮ ಬಿಕಾಂ ನಡೆಸಿದರು. ಪ್ರಥಮ ಬಿಎ ಯ ವಿಖ್ಯಾತ್ ಧನ್ಯವಾದ ಸಮರ್ಪಣೆ ಮಾಡಿದರು.


























