ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಕೆಮ್ಮಾಯಿ ಹಾಗೂ ಬನ್ನೂರಿನಲ್ಲಿ ಭರ್ಜರಿ ಮತ ಪ್ರಚಾರ ಸಭೆ ನಡೆಯಿತು.

ಭ್ರಷ್ಟಾಚಾರದ ವಿರುದ್ಧ ಹೋರಾಡಲು ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಯಾವುದೇ ಗುಂಪುಗಾರಿಕೆ ನಮ್ಮಲ್ಲಿಲ್ಲ ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಕೆಮ್ಮಾಯಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಕಾವು ಹೇಮನಾಥ ಶೆಟ್ಟಿಯವರು ಹೇಳಿದರು.

ಬನ್ನೂರಿನಲ್ಲಿ ನಡೆದ ಸಭೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಶಾರದಾ ಅರಸ್, ವಿಶಾಲಾಕ್ಷಿ ಬನ್ನೂರು, ಈಶ್ವರ ಭಟ್, ವಿಲ್ಮಾ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





























