ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ಮಹಿಳಾ ಸಮಾವೇಶ ‘ಸೀತಾ ಪರಿವಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಹಿಂದುತ್ವದ ಅಡಿಯಲ್ಲಿ ಸುಮಾರು ವರ್ಷಗಳಿಂದ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಕಾರ್ಯಕರ್ತರ ಅಪೇಕ್ಷೆಯಂತೆ ಈ ಬಾರಿ ಪಕ್ಷೇತರ
ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದು, ಅವರ ಬೆಂಬಲವಾಗಿ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಮಹಿಳಾ ಸಮಾವೇಶಕ್ಕೆ ಆಗಮಿಸಿದ್ದಾರೆ.

ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು ಅಕ್ಷಯ ಗೋಖಲೆ ರವರು ಮಾಡುತ್ತಿದ್ದು, ಅಭ್ಯರ್ಥಿ ಅರುಣ್ ಪುತ್ತಿಲ ಸಹಿತ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದಾರೆ.
ಅರುಣ್ ಪುತ್ತಿಲ ರವರು ಈ ಬಾರಿ ಚುನಾವಣೆಯಲ್ಲಿ ಜಯಶಾಲಿಯಾಗಬೇಕೇನ್ನುವ ಆಶಯವನ್ನಿಟ್ಟುಕೊಂಡು ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.























