ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಅಭಿಮಾನಿ ಬಳಗದಿಂದ ‘ವಿಶ್ವ ಸಂಕಲ್ಪ’ ಕಾರ್ಯಕ್ರಮ ಬೈಪಾಸ್ ರಸ್ತೆಯ ಆಶ್ಮಿ ಕಂಫರ್ಟ್ ನಲ್ಲಿ ನಡೆಯುತ್ತಿದ್ದು, ಹಲವಾರು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಮಹಿಳೆಯರು, ಕಾರ್ಯಕರ್ತರು ಹಾಗೂ ಪುತ್ತಿಲ ಅಭಿಮಾನಿ ಬಳಗದವರು ‘ವಿಶ್ವ ಸಂಕಲ್ಪ’ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ರವರು ಈ ಬಾರಿ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೇನ್ನುವುದು ಕಾರ್ಯಕರ್ತರ ಆಶಯವಾಗಿತ್ತು. ಅದೇ ರೀತಿ ಅವರು ಚುನಾವಣಾ ಕಣಕ್ಕಿಳಿದಿದ್ದು, ಅವರು ಜಯಗಳಿಸಬೇಕೆನ್ನುವ ನಿಟ್ಟಿನಲ್ಲಿ ಕಾರ್ಯಕರ್ತರು ಹಗಲು ರಾತ್ರಿ ಶ್ರಮಿಸುತ್ತಿದ್ದು, ಮತಯಾಚನೆಗಾಗಿ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ..

























