ಬೆಳ್ತಂಗಡಿ: ಟೊಯೋಟಾ ಕ್ವಾಲೀಸ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 5 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಡೆದಿದೆ. ಕೋವಿಡ್-19 ಲಾಕ್ ಡೌನ್ ಹಿನ್ನೆಲೆ ತಾಲೂಕಿನಾದ್ಯಂತ ಪೊಲೀಸ್ ಇಲಾಖೆ ತಪಾಸಣೆ ನಡೆಸುತ್ತಿದ್ದು, ವಾಹನಗಳನ್ನು ತಪಾಸಣೆ ಮಾಡುವ ಸಮಯದಲ್ಲಿ ಟೊಯೋಟಾ ಕ್ವಾಲೀಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ದೊರೆತಿದೆ.
ಮದ್ಯವನ್ನು ಮಾರಾಟದ ಉದ್ದೇಶಕ್ಕಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದ್ದು, ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳನ್ನು ಶಿಬಾಜೆ ಗ್ರಾಮದ ಅಭಿಲಾಶ್, ಬಿನ್: ಅಬ್ರಾಮ್ ಎಂದು ಗುರುತಿಸಲಾಗಿದ್ದು, ವಾಹನದ ಮಾಲೀಕರು ಯಾರೆಂದು ತಿಳಿದು ಬಂದಿಲ್ಲ.
ಪ್ರಕರಣವನ್ನು ಬೆಳ್ತಂಗಡಿ ವಲಯದ ಅಬಕಾರಿ ನಿರೀಕ್ಷಕಿ ಸೌಮ್ಯಲತಾ ಎನ್. ದಾಖಲು ಮಾಡಿಕೊಂಡಿದ್ದು, ಜಿಲ್ಲಾ ಅಬಕಾರಿ ಉಪ ಆಯುಕ್ತ ಬಿಂದು ಶ್ರೀ.ಪಿ, ಬಂಟ್ವಾಳ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕಿ ಶೋಭಾ ಕೆ. ಬೆಳ್ತಂಗಡಿ ವಲಯ ಕಚೇರಿಯ ಅಬಕಾರಿ ಮುಖ್ಯ ಪೇದೆ ಸಯ್ಯದ್ ಶಬೀರ್ ಹಾಗೂ ಅಬಕಾರಿ ಪೇದೆಯವರಾದ ಭೋಜ ಕೆ. ಶಿವಶಂಕ್ರಪ್ಪ, ರವಿಚಂದ್ರ ಬೂದಿಹಾಳ ಮತ್ತು ವಾಹನ ಚಾಲಕ ನವೀನ್ ಕುಮಾರ್ ಪಿ. ಮುಂತಾದವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.