ಪುತ್ತೂರು ಮೂಲದ ಯುವತಿಯೋರ್ವರು ಬೆಂಗಳೂರಿನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಸೋಮಾವತಿ ರೈ ದಂಪತಿಯ ಪುತ್ರಿ ಶ್ರುತಿ ಸಿ.ರೈ (22) ಮೃತ ಯುವತಿ.
ಶ್ರುತಿ ಕಳೆದೆರಡು ವರುಷಗಳಿಂದ ಬೆಂಗಳೂರಿನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದು, ಅಲ್ಲಿಯೇ ವಾಸ್ತವ್ಯ ಹೊಂದಿದ್ದರು. ಕೋರ್ಸ್ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದರು.
ಬಾಡಿಗೆ ರೂಂ ನಲ್ಲಿ ಕೆಲ ದಿನಗಳ ಹಿಂದೆ ಅವರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಎ.30 ರಂದು ಮೃತಪಟ್ಟಿದ್ದು, ಮೇ.1 ರಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನೆರವೇರಿಸಿರುವುದಾಗಿ ತಿಳಿದು ಬಂದಿದೆ..