ಪುತ್ತೂರು : ಮುಂಬೈ ಉತ್ತರ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ರವರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಪ್ರಚಾರಕ್ಕಾಗಿ ನಾಳೆ (ಎ.5) ಪುತ್ತೂರಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, 10.30ಕ್ಕೆ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
11 ಗಂಟೆಯಿಂದ 12.30ರವರೆಗೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಮಧ್ಯಾಹ್ನ 12.30 ರಿಂದ 1.30ರವರೆಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮ ರವರ ಜೊತೆ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ ಊಟದ ಬಳಿಕ ಮತ್ತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ..