ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ
ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪೋಟೋ ಬಳಕೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ದೂರು ನೀಡಿದೆ.
ಪಕ್ಷೇತರ ಅಭ್ಯರ್ಥಿ ಪುತ್ತಿಲ ಚುನಾವಣಾ ನೀತಿ ಸಂಹಿತೆ
ಉಲ್ಲಂಘನೆ ಮಾಡಿರುವುದಾಗಿ ಬಿಜೆಪಿ ಅಭ್ಯರ್ಥಿಯ
ಚುನಾವಣಾ ಏಜೆಂಟ್ ರಾಜೇಶ್ ಬನ್ನೂರು ಅವರು
ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಅರುಣ್ ಪುತ್ತಿಲ ಬಿಜೆಪಿಯ ತಾರಾ ಪ್ರಚಾರಕರ ಪೋಟೋ ಬಳಸಿಕೊಳ್ಳುತ್ತಿದ್ದಾರೆ. ನಾಳಿನ ಪ್ರಚಾರಕ್ಕೆ ಪುತ್ತೂರಿಗೆ ಆಗಮಿಸುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಸ್ವಾಗತ ಕೋರಿ ಜಾಹೀರಾತು ಹಾಕುವ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಯಾವುದೇ ಪತ್ರಿಕೆಗೆ ಅರುಣ್ ಪುತ್ತಿಲ ಹಾಗೂ ಅಭಿಮಾನಿಗಳು ಜಾಹೀರಾತು ನೀಡದಂತೆ ಪತ್ರಿಕೆಗಳಿಗೆ ನೋಟಿಸ್ ನೀಡುವಂತೆ ತಾಲೂಕು ಚುನಾವಣಾ ಅಧಿಕಾರಿಗೆ ದೂರು ನೀಡಲಾಗಿದೆ.























