ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ.

ಪ್ರವೀಣ್ ಚಂದ್ರ ನಾಯಕ್ (45) ಮೃತರು.
ವೃತ್ತಿಯಲ್ಲಿ ಛಾಯಗ್ರಾಹಕರಾಗಿದ್ದು, ಪಕ್ಷದ ಕ್ರಿಯಾಶೀಲ ಕಾರ್ಯಕರ್ತರಾಗಿದ್ದರು. ಪ್ರಗತಿ ಪರ ಕೃಷಿಕನಾಗಿಯೂ ಗುರುತಿಸಿಕೊಂಡಿದ್ದ ಪ್ರವೀಣ್ ಅವರು ಇಂದು ಚುನಾವಣಾ ಪ್ರಚಾರದ ವೇಳೆ ತಲೆ ಸುತ್ತು ಕಂಡು ನೆಲಕ್ಕೆ ಬಿದ್ದರು ಎನ್ನಲಾಗಿದೆ.
ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೂ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.

























