ಪುತ್ತೂರು : ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಹಿನ್ನಲೆ ಪುತ್ತೂರು ವಿಧಾನ ಸಭಾ ಕ್ಷೇತ್ರ ರಂಗೇರಿದ್ದು, ಇದೀಗ ಯೋಗಿ ಆದಿತ್ಯನಾಥ್ ಅವರು ಪುತ್ತೂರಿನ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ಗೆ ಬಂದಿಳಿದಿದ್ದಾರೆ.
ಅಲ್ಲಿಂದ ಕಾರಿನ ಮೂಲಕ ಆಗಮಿಸಲಿದ್ದಾರೆ.

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ನಡೆಸಲಿದ್ದಾರೆ. ಯೋಗಿ ಆದಿತ್ಯನಾಥ್ ಭೇಟಿ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಪೊಲೀಸ್ ಸರ್ಪಗಾವಲು ಇದ್ದು, ರಾಜ್ಯ ಪೊಲೀಸ್ ಮತ್ತು ಕೇಂದ್ರ ಮೀಸಲು ಪಡೆಯಿಂದ ಬಂದೋಬಸ್ತ್ ಮಾಡಲಾಗಿದೆ.
ನಗರದ ಮುಖ್ಯ ರಸ್ತೆಯಲ್ಲಿ ಯೋಗಿ ರೋಡ್ ಶೋ ನಡೆಯಲಿದ್ದು, ಪ್ರಧಾನ ಅಂಚೆ ಕಛೇರಿಯಿಂದ ಮಾರುಕಟ್ಟೆ ರಸ್ತೆಯಲ್ಲಿ ರೋಡ್ ಶೋ ನಡೆಯಲಿದೆ. ರೋಡ್ ಶೋ ಬಳಿಕ ಕಿಲ್ಲೆ ಮೈದಾನದಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಯೋಗಿ ಮಾತನಾಡಲಿದ್ದಾರೆ..




























