ಪುತ್ತೂರು : ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರ ಪರ ಮೇ.8 ರಂದು ಬೃಹತ್ ರೋಡ್ ಶೋ ನಡೆಯಲಿದೆ.
ಮಧ್ಯಾಹ್ನ 2.30ರಿಂದ ಸಂಜೆ 5ರ ವರೆಗೆ ಬೊಳುವಾರಿನಿಂದ ದರ್ಬೆ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಯಲಿದೆ.
ಖ್ಯಾತ ಚಲನಚಿತ್ರ ನಟಿ, ಮೋಹಕ ತಾರೆ ರಮ್ಯಾ ಮತ್ತು ಖ್ಯಾತ ವಾಗ್ಮಿ ನಿಕೇತ್ ರಾಜ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ.




























