ಬೆಂಗಳೂರು : ಕರ್ನಾಟಕದಲ್ಲಿ 2 ನೇ ಅಲೆ ಕೊರೊನಾ ವೈರಸ್ ಆರ್ಭಟವನ್ನು ಮುಂದುವರೆಸಿದೆ. ಆದೇ ರೀತಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡು ಬರುತ್ತಿದೆ.ಇದೀಗ ರಾಜ್ಯದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆಗೊಂಡಿದ್ದು.
ಇಂದು ಒಂದೇ ದಿನ 14142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡದಲ್ಲಿ 1175, ಉಡುಪಿಯಲ್ಲಿ 568, ಉತ್ತರ ಕನ್ನಡ 377 ಸೇರಿದಂತೆ ರಾಜ್ಯದಲ್ಲಿ ಒಂದೇ ದಿನ 35024 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಐಸಿಯುನಲ್ಲಿ 2431 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 206 ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ತೀವ್ರ ಅಸ್ವಸ್ಥರಾದ ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರು ಹೋಮ್ ಐಸೋಲೇಷನ್ ಆಗಿದ್ದಾರೆ. ಐಸಿಯುನಲ್ಲಿ 138 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.